ಅವ್ವ ಮಾದೇಶ್, ಇಂದು ಮೈಸೂರು ನ್ಯಾಯಾಲಯಕ್ಕೆ ಹಾಜರು ಸಾಧ್ಯತೆ..?

Thursday, September 23, 2021

ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮೈಸೂರು ನಗರ ಪಾಲಿಕೆಯ ಜೆಡಿಎಸ್ ಮಾಜಿ ಸದಸ್ಯ ಅವ್ವ ಮಾದೇಶ್, ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ.

ಕೋಕಾ ಕಾಯ್ದೆಯಡಿ ಅವ್ವ ಮಾದೇಶ ಹಾಗೂ ಇತರರನ್ನು ಪೊಲೀಸರು ಮೈಸೂರು ನ್ಯಾಯಾಲಯಕ್ಕೆ ಹಾಜರು ಪಡಿಸುವ ಬಗ್ಗೆ ಮಾಹಿತಿ ಲಭ್ಯ.

ಹುಣಸೂರು ಬಳಿ 2008ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಮಾದೇಶ, ಮಂಜು ಸೇರಿ 8 ಮಂದಿಗೆ 2016ರಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಆ ಕೊಲೆ ನಡೆದಿತ್ತು.
ಈ ಪ್ರಕರಣದಲ್ಲಿ ಅಕ್ರಮ ಹಣಕಾಸು ವ್ಯವಹಾರ ನಡೆದಿರುವ ಸಂದೇಹದಲ್ಲಿ ಜಾರಿ ನಿರ್ದೇಶನಾಲಯವು ಪ್ರಕರಣ ದಾಖಲಿಸಿಕೊಂಡಿತ್ತು.

ಜತೆಗೆ ಕೊಲೆ, ಸುಲಿಗೆ ಮತ್ತು ಬೆದರಿಕೆ ಹಾಕಿ ಅವ್ವಾ ಮಾದೇಶ ಅಪಾರ ಹಣ ಗಳಿಸಿದ್ದು, ಅದನ್ನು ಕುಟುಂಬ ಸದಸ್ಯರ ಹೆಸರಿನಲ್ಲಿ ವಿವಿಧೆಡೆ ಹೂಡಿಕೆ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿ, ಆಸ್ತಿ ಜಪ್ತಿಗೆ ಜಾರಿ ನಿರ್ದೇಶನಾಲಯ ತಿಳಿಸಿತ್ತು.

ಈ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಅವ್ವಾ ಮಾದೇಶ ಮತ್ತು ಆತನ ಸಹೋದರ ಮಂಜುಗೆ ಸೇರಿದ 5.35 ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿತ್ತು.

Share