ಕೋವಿಡ್ ಹೆಚ್ಚಳ ಹಿನ್ನೆಲೆ: ಆಸ್ಪತ್ರೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ ಸಚಿವದ್ವಯರು

Thursday, April 22, 2021

ಮೈಸೂರು,.22:-  ಮೈಸೂರಿನಲ್ಲಿಂದು ಸಚಿವದ್ವಯರಿಂದ ಆಸ್ಪತ್ರೆಗಳ ಪರ್ಯಟನೆ ನಡೆಸಿದರುಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್  ಒಂದು ಸುತ್ತು ಪರ್ಯಟನೆ ನಡೆಸಿದರು.

ಮೈಸೂರಿನಲ್ಲಿಯೂ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿಂದು ಮೈಸೂರಿನ ಮೇಟಗಳ್ಳಿಯ ಜಿಲ್ಲಾ ಕೋವಿಡ್ ಆಸ್ಪತ್ರೆ, ಟ್ರಾಮಾ ಸೆಂಟರ್ನಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರ್, ಕೆ.ಆರ್‌.ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳಿಂದಮಾಹಿತಿ ಸಂಗ್ರಹಿಸಿದರು. ಇದೇ ವೇಳೆ ಸಂಬಂಧಿಸಿದ ಅಧಿಕಾರಿಗಳಿಗೆ ಆಸ್ಪತ್ರೆಗಳ ಮೂಲಸೌಕರ್ಯ, ಸಾಮರ್ಥ್ಯ ಹೆಚ್ಚಿಸಲು ಸೂಚನೆ ನೀಡಿದರುಏತನ್ಮಧ್ಯೆ ಕೋವಿಡ್ ನಿಯಂತ್ರಣಕ್ಕೆ ಸಹಕರಿಸದ ಖಾಸಗಿ ಆಸ್ಪತ್ರೆಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲಂಬಿಯಾ, ನಾರಾಯಣ ಹೃದಯಾಲಯಕ್ಕೂ ಸಚಿವರು ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಸಂದರ್ಭ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Share