ದೊಡ್ಡಗೌಡ್ರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ: ತಾತನಾದ ಸಂಭ್ರಮದಲ್ಲಿ ಮಾಜಿ ಸಿಎಂ

Friday, September 24, 2021

ದೊಡ್ಡಗೌಡ್ರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ನಟ ನಿಖಿಲ್‌ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಗಂಡು ಮಗು ಜನಿಸಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಹೊಸ ಸದಸ್ಯನ ಆಗಮನದಿಂದ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.\.

2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ವಿವಾಹವಾಗಿದ್ದರು. ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿಕೊಂಡಿದ್ದರು.


Share