ನಂಜನಗೂಡು ದೇಗುಲದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತ ದೇಹ ಪತ್ತೆ

Sunday, September 26, 2021

ನಂಜುಂಡೇಶ್ವರ ದೇವಾಲಯದ ದಾಸೋಹ ಭವನದ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಮುಂಜಾನೆ ಎಂದಿನಂತೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಈ ದೃಶ್ಯವನ್ನು ನೋಡಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತ ವ್ಯಕ್ತಿ ಯಾರು ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ನಂಜನಗೂಡು ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share