ಬಾರ್ ನಲ್ಲಿ ಗಲಾಟೆ, ಬಿಜೆಪಿ ಯುವಮುಖಂಡ ಸೇರಿದಂತೆ 8 ಮಂದಿಗೆ ಜೈಲು

Ravi K.

Sunday, February 14, 2021

ಬಾರ್ ನಲ್ಲಿ ಗಲಾಟೆ ಮಾಡಿ ಮಾಲೀಕರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಜೆಪಿ ಯುವಮುಖಂಡ ಸೇರಿದಂತೆ 8 ಮಂದಿಗೆ ಜೈಲು ಶಿಕ್ಷೆ ವಿಧಿಸಿ ಮೈಸೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ನಂಜನಗೂಡು ನಗರ ಬಿಜೆಪಿ ಪ್ರಧಾನಕಾರ್ಯದರ್ಶಿ ಧನರಾಜ್ ಸೇರಿದಂತೆ 8 ಮಂದಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಮೈಸೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ಧನರಾಜ್ 2016ರಂದು ನಂಜನಗೂಡಿನ ಅಕ್ಷಯ ಬಾರ್ ನಲ್ಲಿ ಸ್ನೇಹಿತರ ಜೊತೆ ಬಂದು ಗಲಾಟೆ ಮಾಡಿ ಹಲ್ಲೆ ನಡೆಸಿದ್ದ. ಬಿಜೆಪಿ ಯಲ್ಲಿ ಸಕ್ರಿಯನಾಗಿದ್ದ ಧನರಾಜ್ ಗೆ ನಟೇಶ್,ಕುಮಾರ್,ನಂಜಪ್ಪ,ದೇವರಾಜ್,ಮೂರ್ತಿ,ಕೃಷ್ಣ,ಮಂಜು ಸಾಥ್ ನೀಡಿದ್ದರು.
ಆರೋಪ ಸಾಬೀತಾದ ಹಿನ್ನಲೆಯಲ್ಲಿ 8 ಮಂದಿಗೆ ಮೂರು ವರ್ಷ ಜೈಲು ಶಿಕ್ಷೆ ಜೊತೆಗೆ,7500 ರೂ. ದಂಡ ವಿಧಿಸಲಾಗಿದೆ. ನ್ಯಾಯಾಧೀಶರಾದ ರಾಮಚಂದ್ರ.ಡಿ.ಹುದ್ದಾರ್ ತೀರ್ಪು ಪ್ರಕಟಿಸಿದ್ದು, ಸರ್ಕಾರದ ಪರ ಪಿಪಿ ಚಂದ್ರಶೇಖರ್ ವಾದ ಮಂಡಿಸಿದ್ದರು. ಇದೀಗ ನಂಜನಗೂಡು ಶಾಸಕ ಹರ್ಷವರ್ಧನ್ ಗೆ ಆಪ್ತನಾಗಿರುವ ಧನರಾಜ್ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ.

Share