ವೈದ್ಯಕೀಯ ಸಂಶೋಧನಾಲಯದ ಡೀನ್ ಗೆ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ

Thursday, April 22, 2021

ಮೈಸೂರು.22:-  ಜಿಲ್ಲಾ ಕೋವಿಡ್ ಆಸ್ಪತ್ರೆ ಜೊತೆ ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಿ. ಇಲ್ಲವಾದರೆ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಮೈಸೂರು ವೈದ್ಯಕೀಯ ಸಂಶೋಧನಾಲಯದ ಡೀನ್ನಂಜರಾಜ ಅರಸ್ ಅವರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದರು.

ಮೈಸೂರಿನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಭೇಟಿ ನೀಡಿ ಆಸ್ಪತ್ರೆಯ ಸ್ಥಿತಿಗತಿ ಅವಲೋಕಿಸಿದರು. ವೇಳೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು  ಉಪಸ್ಥಿತರಿದ್ದರು.

ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಮೈಸೂರು ವೈದ್ಯಕೀಯ ಸಂಶೋಧನಾಲಯದ ಡೀನ್ ನಂಜರಾಜ ಅರಸ್ ಅವರಿಗೆ ಸಚಿವ ಡಾ.ಕೆ.ಸುಧಾಕರ್ ಗೆ ಎಚ್ಚರಿಕೆ ನೀಡಿದ ಘಟನೆ ನಡೆಯಿತು.

ಜಿಲ್ಲಾ ಕೋವಿಡ್ ಆಸ್ಪತ್ರೆ ಜೊತೆ ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಿ. ಇಲ್ಲವಾದರೆ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ.

ಅದನ್ನು ನಾನು ಸಹಿಸಲು ಸಾಧ್ಯವಿಲ್ಲ ಇನ್ಮುಂದೆ ರೀತಿ ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Share