ಸಿಎಂ ಬದಲಾವಣೆ ವಿಚಾರ: ಕೊನೆಗೂ ಮೌನ ಮುರಿದ ಸಿಎಂ ಬಿಎಸ್ ಯಡಿಯೂರಪ್ಪ

Wednesday, July 21, 2021

ಸಿಎಂ ಬದಲಾವಣೆ ವಿಚಾರ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಕೊನೆಗೂ ಮೌನ ಮುರಿದಿದ್ದಾರೆ. 

ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆಎಂದು ಟ್ವೀಟಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಾಗುತ್ತಿದೆ. ಬಿಎಸ್ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಗುಂಪೊಂದು ಶತಾಯಗತಾಯ ಪ್ರಯತ್ನಗಳನ್ನು ನಡೆಸುತ್ತಿದೆ. 

ಇನ್ನು ಜುಲೈ 26ಕ್ಕೆ ಬಿಎಸ್ ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿ ಎರಡು ವರ್ಷ ಪೂರೈಸಲಿದ್ದು ಅಂದೇ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

Share